ಜಾನಪದ ಸಂಸ್ಕೃತಿ ಉಳಿಸುವುದು ಅವಶ್ಯ

utsava
ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಾನಪದ ಉತ್ಸವ ನಡೆಯಿತು.
Published on

ಕುಂದಾಪುರ: ಇಂದಿನ ಆಧುನಿಕ ವೇಗದ ಬದುಕಿನ ಭರಾಟೆಯಲ್ಲಿ ತಲಾಂತರಗಳಿಂದ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿ ಜೀವನವನ್ನು ಶ್ರೀಮಂತಗೊಳಿಸಿದ ಮೌಖಿಕ ಪರಂಪರೆಯಾದ ಅಮೂಲ್ಯ ಜಾನಪದ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆ ಉಳಿಸಬೇಕದ ತುರ್ತು ಅಗತ್ಯವಿದೆ ಎಂದು ಕಲಾ ಚಿಗುರು ಕಲಾ ತಂಡದ ಚೇತನ್ ನೈಲಾಡಿ ಹೇಳಿದರು.

ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಜಾನಪದ ಉತ್ಸವ- ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಿದ್ಯಾರ್ಥಿ ವೇದಿಕೆ ನಾಯಕರಾದ ನಿತಿನ್ ಮತ್ತು ತಿಲಕ ಎಂ.ಎಂ., ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಡಾ. ಭಾಗೀರಥಿ ನಾಯ್ಕ ಸ್ವಾಗತಿಸಿದರು. ಸಾಂಸ್ಕೃತಿಕ ಪ್ರತಿನಿಧಿ ವಿಶ್ವನಾಥ ವಂದಿಸಿದರು. ವಿದ್ಯಾರ್ಥಿನಿ ಕಾವ್ಯ ಮತ್ತು ತಂಡ ಪ್ರಾರ್ಥಿಸಿತು. ನಾಗರಾಜ ವೈದ್ಯ ಎಂ. ಅತಿಥಿ ಪರಿಚಯಿಸಿದರು. ಸ್ವರ್ಣಿತಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net