ಹಸಿವು ನೀಗಿಸುವುದು ಪ್ರತಿಯೊಬ್ಬರ ಕರ್ತವ್ಯ: ಬೇಬಿಮ್ಯಾಥ್ಯೂ

ahara dinacharane
Published on

ಮಡಿಕೇರಿ: ಹಸಿವು ನೀಗಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಹೇಳಿದರು.


ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಸಭಾಂಗಣದಲ್ಲಿ ಬುಧವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನ, ಕೊಡಗು ಜಿಲ್ಲೆಯ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಆಹಾರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.


ಆಹಾರದ ಕೊರತೆಯಿಂದ ಉಲ್ಬಣಿಸಿರುವ ಹಸಿವಿನ ಜಾಗತಿಕ ಸಮಸ್ಯೆ ನಿವಾರಿಸುವಲ್ಲಿ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು. ಆಹಾರ ಪೋಲು-ರಾಷ್ಟ್ರೀಯ ನ?್ಟ, ನಾವು ನಮ್ಮ ನೆಲೆಯಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯುವ ಪ್ರಯತ್ನ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಆಹಾರ ಸಂರಕ್ಷಣೆ ಕುರಿತು ಹೆಚ್ಚಿನ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಆಹಾರ ಅಪವ್ಯಯವನ್ನು ತಡೆಗಟ್ಟಲು ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.


ಒಮ್ಮೆ ಆಹಾರದ ಕೊರತೆ ಉಂಟಾದರೆ ಇಡೀ ದೇಶದಲ್ಲೇ ಹಾಹಾಕಾರ ಉಂಟಾಗುತ್ತದೆ. ಆದ್ದರಿಂದ ಕನಿ?್ಠ ನಾವುಗಳು ಒಂದು ಎಚ್ಚರಿಕೆಯನ್ನಾದರೂ ವಹಿಸಬೇಕು. ಪ್ರತಿಯೊಬ್ಬರೂ ಆಹಾರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿಶ್ವಾದ್ಯಂತ ಇಂದಿಗೂ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಈ ನಡುವೆ ನಾವು ಪೋಲು ಮಾಡುತ್ತಿರುವ ಆಹಾರದ ಪ್ರಮಾಣವನ್ನು ತಗ್ಗಿಸಿ ಉತ್ತಮ ಭವಿ?್ಯಕ್ಕಾಗಿ ಆಹಾರವನ್ನು ಸಂರಕ್ಷಿಸಬೇಕು ಎಂದು ಹೇಳಿದರು.


ಆಹಾರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಮತ್ತು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಆಹಾರದ ಕೊರತೆಯಿಂದ ಉಲ್ಬಣಿಸಿರುವ ಹಸಿವು ಎಂಬುದು ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಜಾಗತಿಕ ಹಸಿವು ನಿವಾರಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.


ಆಹಾರದ ಹಕ್ಕು ಪ್ರತಿಯೊಬ್ಬರ ಹಕ್ಕು ಆಗಿದೆ. ನಮಗೆ ತಿನ್ನುವ ಹಕ್ಕಿದೆ. ಆದರೆ, ನಮಗೆ ಬಿಸಾಡುವ ಹಕ್ಕು ಇಲ್ಲ. ಮಾನವನ ಅಭಿವೃದ್ಧಿ, ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಪೌಷ್ಟಿಕ ಆಹಾರ ಅತ್ಯಗತ್ಯ ಎಂದರು.


ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಪ್ರತಿಯೊಬ್ಬರೂ ಆಹಾರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.


ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತೆಯೂ ಆಗಿರುವ ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಂಸ್ಥೆಯ ಸಹ ಕಾರ್ಯದರ್ಶಿಗಳಾದ ಬೊಳ್ಳಜೀರ ಬಿ.ಅಯ್ಯಪ್ಪ, ಈರಮಂಡ ಹರಿಣಿ ವಿಜಯ್, ಜಿಲ್ಲಾ ಗೈಡ್ಸ್‌ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್‌ನ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್‌ನ ತರಬೇತಿ ಆಯುಕ್ತೆ ಮೈಥಿಲಿರಾವ್, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್ ತರಬೇತಿ ಆಯುಕ್ತೆ ಮೈಥಿಲಿರಾವ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ , ತರಬೇತಿ ಸಹಾಯಕ ಆಯುಕ್ತೆ ಅಲೀಮ, ಕಬ್ಸ್ ವಿಭಾಗದ ಮುಖ್ಯಸ್ಥೆ ಡೈಸಿ, ಸಂಸ್ಥೆಯ ದಳ ನಾಯಕಿ ಗಾಯನ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net