ಮತದಾರರ ಋಣ ತೀರಿಸಲು ಅಸಾಧ್ಯ

bdm 27-1
ಬಾದಾಮಿ ಪಟ್ಟಣದ ಬನಶಂಕರಿ ರಸ್ತೆಯ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಗುರುವಾರ ರಾತ್ರಿ ಚಿಮ್ಮನಕಟ್ಟಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ 42ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿದರು. ಶಿವಯೋಗಮಂದಿರ ಸಂಸ್ಥೆ ಉಪಾಧ್ಯಕ್ಷ, ಹಾವೇರಿ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮಿಗಳು, ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಇತರರಿದ್ದರು.
Published on

ಬಾದಾಮಿ: ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿ. ಮತದಾರರ ಋಣ ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದು ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪಟ್ಟಣದ ಬನಶಂಕರಿ ರಸ್ತೆಯ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಗುರುವಾರ ರಾತ್ರಿ ಚಿಮ್ಮನಕಟ್ಟಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ 42ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನ್ನ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಇಷ್ಟೆಲ್ಲ ಜನ ಸೇರಿರುವುದು ಹೆಮ್ಮೆ ತಂದಿದೆ. ಮೊದಲೇ ಹೇಳಿದಂತೆ ರಕ್ತದಾನ ಮಾಡಿ ಇನ್ನೊಬ್ಬರಿಗೆ ಸಹಾಯವಾಗುವಂತೆ ಮಾಡಿದ್ದೇನೆ. ಶಾಸಕನಾಗಿ ಆಯ್ಕೆಯಾದ ನಂತರ ಬಾದಾಮಿ ಮತಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಯೋಜನೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಸಚಿವರಿಂದ ಅನುಮೋಧನೆಯನ್ನೂ ಪಡೆಯಲಾಗಿದೆ. ಹಂತ ಹಂತವಾಗಿ ಅನುಷ್ಠಾನಗೊಳಿಸುವೆ. ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ತಿಳಿಸಿದರು.

ಶಿವಯೋಗಮಂದಿರ ಸಂಸ್ಥೆ ಉಪಾಧ್ಯಕ್ಷ, ಹಾವೇರಿ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಮಾತನಾಡಿದರು. ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಸುಮಡ್ಡಿ ಚರ್ಚ್ ಾದರ ರೆವರೆಂಡ್ ಪುನ್ನಪ್ಪ ಬಂಡಿ, ಶಿರೂರ ಕನಕ ಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಶ್ರೀ, ಕೆರೂರ ಚರಂತಿಮಠದ ಚರಂತಿಮಠ ಸ್ವಾಮೀಜಿ, ಗುಳೇದಗುಡ್ಡದ ಅಮರೇಶ್ವರಮಠದ ಶ್ರೀ, ಒಪ್ಪತ್ತೇಶ್ವರ ಶ್ರೀ, ಸೋಮನಕೊಪ್ಪದ ಪೂರ್ಣಾನಂದ ಮಠದ ನೀಲಲೋಹಿತ ಶ್ರೀ, ಹಾಲವರ್ತಿ ಬಾದಮಿನಾಳದ ಶಿವಸಿದ್ಧೇಶ್ವ ಶ್ರೀಗಳು ಸೇರಿದಂತೆ ವಿವಿಧ ಶ್ರೀಗಳು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕವಿ ಡಿ.ಆರ್. ಪೂಜಾರ, ಶ್ರೀಕಾಂತಗೌಡ ಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಶಿವಯೋಗಿ ಕುಂಬಾರ, ಉಜ್ವಲ ಬಸರಿ ನಿರೂಪಿಸಿದರು. ನಾಗರಾಜ ಹೊಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net