ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪಿಸದಿರುವುದು ವಿಪರ್ಯಾಸ

bjp leader r.ashok press byte
ಶಿವಮೊಗ್ಗದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದರು.
Published on

ಶಿವಮೊಗ್ಗ: ಇಡೀ ದೇಶದಲ್ಲಿ ಈ ಬಾರಿ ಪ್ರಧಾನಿ ಯಾರಾಗಬೇಕೆಂದು ಚರ್ಚೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಎಲ್ಲಿಯೂ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪ್ರಸ್ತಾಪಿಸದೇ ಇರುವುದು ವಿಪರ್ಯಾಸವೆನಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ಗೆ ಇನ್ನೂ ಗೊಂದಲವಿದೆ. ಹಾಗಾಗಿ ಅದು ತನ್ನ ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಣೆಗೆ ಹಿಂದೇಟು ಹಾಕುತ್ತಿದೆ ಎಂದು ದೂರಿದರು.
ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಜಿಕ ಅತ್ಯಾಚಾರಿ ಎಂದು ಕರೆದಿರುವ ಬಗ್ಗೆ ಗರಂ ಆದ ಅವರು, ರಾಹುಲ್ ಗಾಂಧಿಗೆ ನಾಚಿಗೆ ಆಗಬೇಕು. ಪ್ರಜ್ವಲ್ ರೇವಣ್ಣಗೆ ಗನ್‌ಮ್ಯಾನ್ ಇದ್ದು ವಿದೇಶಕ್ಕೆ ಬಿಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದರು. ಪ್ರಜ್ವಲ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಹಾಗಾದರೆ ಇದು ಕಾಂಗ್ರೆಸ್‌ನ ಗುಪ್ತಚರ ಇಲಾಖೆ ವೈಫಲ್ಯ ಅಲ್ಲವೇ ಎಂದು ವಾಗ್ದಾಳಿ ನಡೆಸಿದರು.
ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ. ಆದರೆ ಇಲ್ಲಿ ಪ್ರಜ್ವಲ್ ರೇವಣ್ಣ ವಿಷಯವೇ ಅಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ರಾಜಕೀಯವಾಗಿ ಕುಗ್ಗಿಸಲು ಕಾಂಗ್ರೆಸ್ ನಾಯಕರು ಆಡುತ್ತಿರುವ ನಾಟಕವಾಗಿದೆ. ಇವರ ಗುಪ್ತಚರ ಇಲಾಖೆ ವೈಫಲ್ಯವನ್ನಿಟ್ಟುಕೊಂಡು ಪ್ರಧಾನಿ ಮೋದಿ ವಿರುದ್ಧ ಹೇಗೆ ಮಾತಾಡುತ್ತೀರಿ ಎಂದು ಪ್ರಶ್ನಿಸಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆಯಿಂದ ಯಾವ ಬದಲಾವಣೆ ಆಗುವುದಿಲ್ಲ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮೂರು ಲಕ್ಷ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net