

ಶಿವಮೊಗ್ಗ: ಕಿದ್ವಾಯಿ ಕ್ಯಾನ್ಸರ್ ಘಟಕದ ಗುದ್ದಲಿಪೂಜೆಗಿಂತ ಮುಖ್ಯವಾಗಿ ಕಟ್ಟಡ ತ್ವರಿತವಾಗಿ ನಿರ್ಮಾಣಗೊಂಡು ಬಡ ರೋಗಿಗಳಿಗೆ ಅನುಕೂಲ ಆಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಶ್ರಯದಲ್ಲಿ ಶನಿವಾರ ಕಿದ್ವಾಯಿ ಮಾದರಿ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯಿಂದ ಶಿವಮೊಗ್ಗ ಮಾತ್ರವಲ್ಲ, ಅಕ್ಕಪಕ್ಕದ ಜಿಲ್ಲೆಗಳ ಜನರಿಗೂ ಅನುಕೂಲ ಆಗಲಿದೆ ಎಂದರು.
ಶಿವಮೊಗ್ಗ ಜಿಲ್ಲೆಗೆ ಹೃದಯ, ಕಿಡ್ನಿ ಸಂಬಂಧಿತ ರೋಗಗಳಿಗೆ ಚಿಕಿತ್ಸೆ ನೀಡುವುದಕ್ಕೆ ಆದ್ಯತೆ ನೀಡಬೇಕಾಗುತ್ತದೆ. ಇದರಿಂದ ಬಡವರು, ಸಾರ್ವಜನಿಕರು ಮಂಗಳೂರು, ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಬೇಕಿದೆ ಎಂದರು.