ಮನಸ್ಸಿಗೆ ಸಂಸ್ಕಾರ ನೀಡುವುದು ಅವಶ್ಯ

25 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಂದಿನ ದಿನಮಾನಗಳಲ್ಲಿ ಮನಸ್ಸಿಗೆ ಸಂಸ್ಕಾರ ಕೊಡುವಂತಹ ಕಾರ್ಯಕ್ರಮಗಳು ಹೆಚ್ಚು ನಡೆದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಮ್ಮಿನಭಾವಿ ಪಂಚಗ್ರಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಮಂಗಳವಾರ ಪೇಟೆಯ ಹಿರೇಮಠ ಓಣಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶ್ರೀ ವೀರಭದ್ರೇಶ್ವರ ಗುಗ್ಗಳೋತ್ಸವ ಹಾಗೂ ಶ್ರೀ ಚನ್ನಯ್ಯ ಸ್ವಾಮಿ ಮಂದಿರದ 21ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಧರ್ಮ ಹಾಗೂ ಆಧ್ಯಾತ್ಮದ ಸಂರಕ್ಷಣೆ ಅತ್ಯವಶ್ಯ. ಇದು ವೇದಿಕೆಗಳಿಗೆ ಮಾತ್ರ ಸೀಮಿತವಾದರೆ ಪ್ರಯೋಜನವಿಲ್ಲ. ಬದಲಾಗಿ ಮನಸ್ಸಿಗೆ ಸಂಸ್ಕಾರ ನೀಡುವ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಮನಸ್ಸಿನಲ್ಲಿ ಧರ್ಮ, ಸಂಸ್ಕೃತಿ, ಪರಂಪರೆ ದೇಶಭಕ್ತಿ ಜಾಗೃತಗೊಳಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಮಾಜಿ ಮೇಯರ್ ಈರೇಶ ಅಂಚಟಗೇರಿ, ಶಕ್ತಿ ಹಿರೇಮಠ, ದೀಪಾ ಹಿರೇಮಠ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net