ಪ್ರತಿನಿತ್ಯ ಹುತಾತ್ಮರ ಸ್ಮರಣೆ ಅವಶ್ಯ

gan
Published on

ಗಂಗೊಳ್ಳಿ: ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣತ್ಯಾಗ ವಾಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಪ್ರತಿಯೊಬ್ಬರನ್ನು ಪ್ರತಿನಿತ್ಯ ಸ್ಮರಿಸಬೇಕು ಎಂದು ವಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯಿತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ತಬ್ರೇಜ್, ಕಾರ್ಯದರ್ಶಿ ಅನೂಪ್ ಶೇಟ್, ಗ್ರಾಮ ಪಂಚಾಯಿತಿ ವಾಜಿ ಸದಸ್ಯ ಬಿ.ಲಕ್ಷ್ಮೀಕಾಂತ ಮಡಿವಾಳ, ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ, ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net