ಸಿದ್ದರಾಮಯ್ಯ ಬಾಯಿಯಿಂದ ಸುಳ್ಳು ಬರುವುದು ಒಳ್ಳೆಯದಲ್ಲ : ಕೇಂದ್ರ ಸಚಿವ ವಿ.ಸೋಮಣ್ಣ

v somanna bjp mp
Published on

ಮೈಸೂರು: ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತನ್ನ ಪಾಲಿನ 26 ಸಾವಿರ ರೂ. ಕೋಟಿ ರೂ. ನೀಡಬೇಕಾಗಿತ್ತು. ಆದರೆ, ಕೇವಲ 11 ಸಾವಿರ ಕೋಟಿ ರೂ. ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹಿರಿಯರಾದ ಸಿದ್ದರಾಮಯ್ಯ ಬಾಯಿಯಿಂದ ಸುಳ್ಳು ಬರುವುದು ಒಳ್ಳೆಯದಲ್ಲ, ಅದು ನಿಮಗೂ ಗೌರವ ಅಲ್ಲ. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಸುಳ್ಳು ಹೇಳುವುದೇ ಕೆಲಸವಾಗಿದೆ ಎಂದು ಸಚಿವ ವಿ.ಸೋಮಣ್ಣ ಟೀಕಿಸಿದರು.

ನೈಋತ್ಯ ರೈಲ್ವೆಯ ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿ 2ನೇ ಪ್ರವೇಶ ದ್ವಾರದ ಹೊಸ ಟಿಕೆಟ್ ಬುಕ್ಕಿಂಗ್ ಕಚೇರಿ ಉದ್ಘಾಟನೆ ಹಾಗೂ ಮೈಸೂರಿನಿಂದ ಅಶೋಕಪುರಂ ರೈಲು ನಿಲ್ದಾಣವರೆಗೆ ರೈಲುಗಳ ಸೇವೆಗೆ ವಿಸ್ತರಣೆಗೆ ಚಾಲನೆ ನೀಡಿ ಮಾತನಾಡಿ, ನಮಗೇನು ಕೊಟ್ಟಿಲ್ಲ ಎಂದು ರಾಜ್ಯ ಸರ್ಕಾರ ದೂರುತ್ತಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳ ಹಾಗೆ ಕೆಲಸ ಮಾಡಬೇಕು. ಆದರೆ, ರಾಜ್ಯ ಸರ್ಕಾರ ಇನ್ನೂ ಅರ್ಥ ಮಾಡಿಕೊಳ್ಳದೆ ಇದ್ದರೆ ಏನು ಮಾಡಲು ಸಾಧ್ಯವಿಲ್ಲ. ಏನು ಕೊಟಿಲ್ಲ ಎನ್ನುವವರೆಗೆ ಕಣ್ಣಿನ ಪೊರೆ ಆವರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net