ಸರ್ಕಾರಿ ನೌಕರರಿಗೆ ವೇತನ ಕೊಡುವುದಕ್ಕೂ ಸಾಧ್ಯವಾಗುತ್ತಿಲ್ಲ

MP B.Y.Raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರದ ಬಳಿ ಸರ್ಕಾರಿ ನೌಕರರಿಗೆ ವೇತನ ಕೊಡುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಅದಕ್ಕಾಗಿ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಆಗಿ ಬದಲಾವಣೆ ಮಾಡುತ್ತಿದೆ. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಹಣ ಪಡೆಯಲಾಗುತ್ತಿದೆ. ಈ ಸರ್ಕಾರದಲ್ಲಿ ಬಡವರ ಆರೋಗ್ಯಕ್ಕೆ ಬೇಕಾದ ಕೆಲಸಗಳು ಆಗುತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಆರ್‌ಎಸ್‌ಎಸ್ ಮತ್ತು ಬಿಜೆಪಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು

ಖರ್ಗೆ ಅವರು ಕೇವಲ ವೋಟಿಗಾಗಿ ಒಂದು ವರ್ಗದ ತುಷ್ಠೀಕರಣ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಭವಿಷ್ಯಕ್ಕಾಗಿ ದೇಶಭಕ್ತ ಸಂಘಟನೆ ಬಗ್ಗೆ ಸಲ್ಲದ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಂದರು.

ನ.25ರಿಂದ ಕೇಂದ್ರದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಮಹಿಳೆಯರ ರಕ್ಷಣೆ, ಒಂದು ರಾಷ್ಟ್ರ ಒಂದು ಚುನಾವಣೆ ಸೇರಿದಂತೆ ಅನೇಕ ಮಸೂದೆಗಳು ಮಂಡನೆ ಆಗುವ ನಿರೀಕ್ಷೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net