

ಮೈಸೂರು: ಈಡಿಗ ಸಮುದಾಯವನ್ನು ಮುನ್ನಡೆಸುತ್ತಿರುವ ಶ್ರೀ ಡಾ.ಪ್ರಣವಾನಂದ ಸ್ವಾಮೀಜಿಗಳ ಬಗ್ಗೆ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ ಹಾಗೂ ಸಚಿವ ಮಧು ಬಂಗಾರಪ್ಪ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಹೀಗಾಗಿ ಇವರಿಬ್ಬರೂ ಸ್ವಾಮೀಜಿಗಳಲ್ಲಿ ಕ್ಷಮೆ ಯಾಚಿಸಬೇಕೆಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಸಂಘಟನಾ ಕಾರ್ಯದರ್ಶಿ ವಸಂತಕುಮಾರ್ ಆಗ್ರಹಿಸಿದರು.
ಶ್ರೀ ಡಾ.ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮುದಾಯದ ಸ್ವಾಮೀಜಿಗಳಲ್ಲ, ಅವರು ಸಮಾಜದ ಅವಿದ್ಯಾವಂತರನ್ನು ದಾರಿ ತಪ್ಪಿಸುತ್ತಿದ್ದಾರೆ. ಇವರಿಗೂ ಈಡಿಗ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಮ್ಮೇಗೌಡ ಹೇಳಿಕೆ ನೀಡಿರುವುದು ಸರಿಯಲ್ಲ. ಸಚಿವ ಮಧು ಬಂಗಾರಪ್ಪ ಅವರು ಸಹ ಸ್ವಾಮೀಜಿಯವರನ್ನು ಅವಹೇಳನ ಮಾಡಿದ್ದಾರೆ. ಆದರೆ, ಸಮಾಜದ ಮೇಲೆ ನಡೆಯುತ್ತಿರುವ ಶೋಷಣೆ ವಿರುದ್ಧ ಧ್ವನಿಯೆತ್ತಿದ್ದಾರೆ. ಸಾವಿರಾರು ಕಿಮೀ ಪಾದಯಾತ್ರೆ ನಡೆಸಿದ್ದರ ಫಲವಾಗಿ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆಯಾಗಿದೆ. ಹೀಗಾಗಿ ಇವರ ವಿರುದ್ಧದ ಅವಹೇಳನ ಖಂಡಿಸುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪದಾಧಿಕಾರಿಗಳಾದ ಮಹದೇವಪ್ಪ, ಕೃಷ್ಣ ಹಾಗೂ ವಾಸು ಇದ್ದರು.