ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಾತ್ರ ವಿದ್ಯಾರ್ಥಿಗಳಿಗೆ ವೈಚಾರಿಕತೆ ಕಲಿಸಲು ಸಾಧ್ಯ

Siddaramaiah
Published on

ಮೈಸೂರು: ಇಂಗ್ಲಿಷ್‌ನಲ್ಲಿ ಮಾತಾಡಿದರೆ ಮಾತ್ರ ಶಿಕ್ಷಣ ಅಲ್ಲ. ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆದಾಗ ಮಾತ್ರ ಶಿಕ್ಷಣಕ್ಕೆ ಬೆಲೆ ಬರುತ್ತದೆ. ಆದ್ದರಿಂದ ಶಿಕ್ಷಣದ ಜತೆಗೆ ಮಕ್ಕಳಲ್ಲಿ ವೈಚಾರಿಕೆತೆ ಬೆಳೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯನಗರ 4ನೇ ಹಂತದ ಎಸ್‌ವಿಇಐ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ರಜತ ಮಹೋತ್ಸವ ಮತ್ತು ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಾತ್ರ ವಿದ್ಯಾರ್ಥಿಗಳಿಗೆ ವೈಚಾರಿಕತೆ ಕಲಿಸಲು ಸಾಧ್ಯವಾಗುತ್ತದೆ ಎಂದರು.

‘ಮೌಡ್ಯವನ್ನು ಬಿಟ್ಟು ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು’ ಎಂದು 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಈ ನಾಡಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ವೈಜ್ಞಾನಿಕವಾಗಿ ಯೋಚನೆ ಮಾಡುವ ಶಕ್ತಿ ಶಿಕ್ಷಕರಿಗೆ ಇರಬೇಕು. ಆ ಮೂಲಕ ಪ್ರತಿಯೊಬ್ಬರಲ್ಲೂ ವೈಜ್ಞಾನಿಕ ಜ್ಞಾನ ಬೆಳೆಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net