

ಐದು ದಶಕಗಳ ಕಾಲ ಸುಧೀರ್ಘ ರಾಜಕೀಯ ಜೀವನದಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಕೆಲಸ ನಿರ್ವಹಿಸಿದ್ದ ವಿ.ಶ್ರೀನಿವಾಸಪ್ರಸಾದ್ ನಿಧನರಾಗಿರುವುದು ದುಃಖ ತಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ದಲಿತರು, ಶೋಷಿತರ ಗಟ್ಟಿ ಧ್ವನಿಯಾಗಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದಿದ್ದರು. ಪ್ರಸಾದ್ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.