ಭೂಮಿ ಹಕ್ಕು ನೀಡುವುದು ಕಾಂಗ್ರೆಸ್ ಕರ್ತವ್ಯ

congress meeting
ಗಾಜನೂರು ಗ್ರಾಮದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ಶಿವರಾಜ್‌ಕುಮಾರ್, ಅನಿಲ್ಕುಮಾರ್ ತಡಕಲ್, ಆರ್.ಪ್ರಸನ್ನಕುಮಾರ್, ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ, ಎಂ.ಶ್ರೀಕಾಂತ್ ಇದ್ದರು.
Published on

ಶಿವಮೊಗ್ಗ: ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಮಾಜಿ ಸಿಎಂ ಎಸ್.ಬಂಗಾರಪ್ಪ ಅವರು ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಕ್ಕ ಸಾಗುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಗಾಜನೂರು ಗ್ರಾಮದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 15 ವರ್ಷಗಳಿಂದ ಬಿಜೆಪಿ ಸುಳ್ಳಿನ ರಾಜಕಾರಣ ಮಾಡಿಕೊಂಡು ಬರುತ್ತಿದೆ. ಇದರಿಂದ ಬಂಗಾರಪ್ಪ ಅವರ ಮಾದರಿ ಕೆಲಸಗಳಿಗೆ ಮಸಿ ಬಳಿಯಲಾಗುತ್ತಿದೆ ಎಂದು ದೂರಿದರು.
ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕೆ ಶ್ರಮಿಸುತ್ತಿದೆ. ಅದೇ ರೀತಿ ಹಿರಿಯರ ಮಾರ್ಗದರ್ಶನದಲ್ಲಿ ನಾನು ಜನರಿಗೆ ನೆರವಾಗುತ್ತೇನೆ ಎಂದರು.
ಮಲೆನಾಡು ಅಭಿವೃದ್ಧಿ ಪ್ರದೇಶ ನಿಗಮದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗಾಜನೂರು ಭಾಗಕ್ಕೆ ಮಾಜಿ ಸಿಎಂ ಬಂಗಾರಪ್ಪ ಅವರು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ತಿಳಿಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್, ನಟ ಶಿವರಾಜ್‌ಕುಮಾರ್, ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ಕುಮಾರ್ ತಡಕಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರಾದ ಎಂ.ಶ್ರೀಕಾಂತ್, ದುಗ್ಗಪ್ಪ ಗೌಡ, ರಾಘವೇಂದ್ರ, ರಮೇಶ್ ಶೆಟ್ಟಿ, ವಿಜಯ್‌ಕುಮಾರ್, ಗಣೇಶ, ನವಿನ್, ಸುಷ್ಮಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net