

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ರಾಯಾಪುರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಟ್ಟಡದಲ್ಲಿ ನ. 5ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿ ವಿಭಾಗದ ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಪಂ ಸಿಇಒ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ, ಟಿಸಿಎಸ್ ಜನರಲ್ ಮ್ಯಾನೇಜರ್ ಶೋಭಾ ಮೂರ್ತಿ ಹಾಗೂ ಕ್ವಿಜ್ ಮಾಸ್ಟರ ರಶ್ಮಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.