ವ್ಯಸನದ ದುಷ್ಪರಿಣಾಮಗಳ ಅರಿವು ಮೂಡಿಸುವ ಕೆಲಸವಾಗಬೇಕು

MDK05
Published on

ಮಡಿಕೇರಿ: ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದು, ಮಕ್ಕಳಲ್ಲಿ ಯುವಕ ಯುವತಿಯರಲ್ಲಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲ ಹೇಳಿದರು.


ಶ್ರೀ ಶಕ್ತಿ ಅಸೋಷಿಯೇಷನ್, ಶಕ್ತಿದಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಜ್ಞಾನ ಕಾವೇರಿ, ಚಿಕ್ಕಅಳುವಾರ, ಕೊಡಗು ವಿಶ್ವವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸುವಂತಾಗಬೇಕು. ಸಮಾಜದಲ್ಲಿ ತುಂಬಾ ವ್ಯಸನಕ್ಕೆ ಒಳಗಾದವರನ್ನು ಶಕ್ತಿಧಾಮ ಕೇಂದ್ರಕ್ಕೆ ದಾಖಲಿಸಿ ವ್ಯಸನಮುಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು.


ಕೂಡ್ಲೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಪಿ.ಮೋಹನ್‌ರಾಜು ಮಾತನಾಡಿ, ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಬೀರುತ್ತದೆ. ಯುವಕ ಯುವತಿಯರು ಆಕರ್ಷಣೆ ಫ್ಯಾಸನ್, ಮೋಜು ಮಸ್ತಿಗಾಗಿ ಈ ವಸ್ತುಗಳ ಸೇವನೆಗೆ ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಗಾಂಜ ವ್ಯಸನಿಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇಂತಹ ವ್ಯಸನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಪೊಲೀಸ್ ಇಲಾಖೆ ಮತ್ತು ಕಾಯ್ದೆಗಳ ಬಗ್ಗೆ ವಿವರಿಸಿದರು.


ಕುಶಾಲನಗರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಾಣೇಶ್ ಮಾತನಾಡಿ, ಪ್ರತಿಯೊಬ್ಬ ಮನುಷ್ಯನ ಜೀವನದ ತಳಪಾಯ ಮನಸು ಆತ್ಮವು ಒಂದು ಬೆಳಕಿನ ಬಿಂದು ಆಗಿರುತ್ತದೆ. ಅತಿಯಾಗಿ ಯೋಚಿಸುವುದರಿಂದ ಮೆದುಳಿಗೆ ಹಾನಿಯಾಗುತ್ತದೆ. ದ್ಯಾನ ಮಾಡುವುದರಿಂದ ಶಾಂತಿ ಸಮದಾನ ಪವಿತ್ರತೆ ಸುಖ ಶಕ್ತಿ ಲಭಿಸುತ್ತದೆ. ವ್ಯವಸನಿಗಳು ವ್ಯಸನ ಮುಕ್ತರಾಗಲು ಧ್ಯಾನ ಮತ್ತು ಆಧ್ಯಾತ್ಮಿಕ ಚಿಂತನೆಗಳ ಮಹತ್ವದ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕೆ.ಹರಿಣಾಕ್ಷಿ, ನಟರಾಜ್, ಶಕ್ತಿಧಾಮದ ಯೋಜನಾ ನಿರ್ದೇಶಕ ಕೆ.ಒ.ಪ್ರಭು, ವೈದ್ಯಾಧಿಕಾರಿ ಡಾ.ಭರತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net