ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಮಲ ಪಕ್ಷ

sri bjp
ಶೃಂಗೇರಿ ತಾಲೂಕಿನ ಗಂಡಘಟ್ಟದಲ್ಲಿ ಬಿಜೆಪಿ-ಜೆಡಿಎಸ್ ಬೂತ್ ಮಟ್ಟದ ಮನೆ ಮನೆ ಸಂಪರ್ಕ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಭಾಗಿಯಾಗಿದ್ದರು. ಜಯಶೀಲಾ, ಚಂದ್ರಶೇಖರ್, ಮಂಜುನಾಥ್, ಸುಧೀಂದ್ರ, ಲಕ್ಷ್ಮಣ ಇತರರಿದ್ದರು.
Published on

ಶೃಂಗೇರಿ: ಮಹಿಳೆಯರಿಗೆ ಶೇ.33 ಮೀಸಲಾತಿ ಜಾರಿಗೊಳಿಸಿ ಅವರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡಿದ ಕೊಡುಗೆ ಅನನ್ಯ ಎಂದು ತಾಪಂ ಮಾಜಿ ಅಧ್ಯಕ್ಷೆ ಜಯಶೀಲಾ ಹೇಳಿದರು.

ಗುರುವಾರ ಗಂಡಘಟ್ಟದಲ್ಲಿ ಜೆಡಿಎಸ್-ಬಿಜೆಪಿ ಬೂತ್ ಮಟ್ಟದ ಮನೆ ಮನೆ ಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ಗುಣಮಟ್ಟದ ಉದ್ಯಮ ತರಬೇತಿ, ಕಡಿಮೆ ಬಡ್ಡಿಯಲ್ಲಿ ಸಾಲ, ವಸತಿ ಯೋಜನೆ, ಆಯುಷ್ಮಾನ್ ಭಾರತ್ ಹಾಗೂ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಗಳಲ್ಲಿ ಮೀಸಲಾತಿ ಒದಗಿಸಿದ ಕೀರ್ತಿ ಪಿಎಂ ನರೇಂದ್ರ ಮೋದಿ ಅವರದು ಎಂದರು.
ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಜಿ.ಜಿ.ಮಂಜುನಾಥ್ ಮಾತನಾಡಿ, ರಾಷ್ಟ್ರದ ಹಿತಕ್ಕಾಗಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬಿಜೆಪಿ ಜತೆ ಕೈಜೋಡಿಸಿದ್ದಾರೆ. ಭ್ರಷ್ಟರಹಿತ, ಜನಹಿತ ಸರ್ಕಾರ ಬರಬೇಕು ಎಂಬುದು ಎಲ್ಲರ ಆಶಯ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನನೆಗುದಿಗೆ ಬಿದ್ದಿವೆ. ರೈತರು ಹಾಗೂ ಜನಸಾಮಾನ್ಯರ ಮೇಲೆ ಕಾಳಜಿ ಇರುವ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸರ್ವರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಮುಖಂಡರಾದ ಸುಧೀಂದ್ರ ಬೆಟ್ಟಗದ್ದೆ, ಸಚಿನ್ ಗುಬ್ಬಗೋಡು, ಲಕ್ಷ್ಮಣ, ಜೆಡಿಎಸ್ ಮುಖಂಡರಾದ ಜಿ.ಜಿ.ಮಂಜುನಾಥ್, ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net