ಐಟಿಡಿಪಿ ನೂತನ ಕಚೇರಿ ಉದ್ಘಾಟನೆ

itdp
Published on

ಮಡಿಕೇರಿ:

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ(ಐಟಿಡಿಪಿ) ಯೋಜನಾ ಸಮನ್ವಯಾಧಿಕಾರಿ ನೂತನ ಕಚೇರಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ ಶನಿವಾರ ಉದ್ಘಾಟಿಸಿದರು.

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net