ಮಾರ್ಗದರ್ಶಿಯಾದ ಪ್ರಣಾಳಿಕೆ

prahlad joshi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಆರ್ಥಿಕವಾಗಿ ಜಗತ್ತಿನ 3ನೇ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ದೇಶದ ಅರ್ಥ ವ್ಯವಸ್ಥೆ ಹಾಗೂ ಆಡಳಿತದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಮಾರ್ಗದರ್ಶಿಯಾದ ಪ್ರಣಾಳಿಕೆಯನ್ನು ರಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಹುಬ್ಬಳ್ಳಿಯಲ್ಲಿ ಭಾನುವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಹು ಆಯಾಮಿ ಬಡತನವಿದ್ದು, ಅದರ ನಿಮೂಲನೆಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ. ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ಜನರು ಬದುಕು ಸುಲಲಿತವಾಗಲಿದೆ ಎಂದರು.

ಜೀವನದಲ್ಲಿ ಸಾಕಷ್ಟು ನೋವು ಅನುಭವಿಸಿದ್ದರೂ ಡಾ. ಅಂಬೇಡ್ಕರ್ ಅವರು ಸಂವಿಧಾನ ರಚನೆ ವೇಳೆ ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿದ ಮಹಾ ಪುರುಷ. ಅವರು ಸಂವಿಧಾನ ರಚನೆ ಸಂದರ್ಭದಲ್ಲಿ ದ್ವೇಷ ರಹಿತವಾಗಿ ಕೆಲಸ ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಅವರನ್ನು ದೇಶ ಸ್ಮರಿಸುತ್ತದೆ. ಸಾಮಾಜಿಕ ಸಮಾನತೆ, ಅಸ್ಪ್ರಶ್ಯ ಭಾವ ಇರದ ಸುಂದರ ಸಮಾಜ ಹಾಗೂ ವಿಕಸಿತ ಭಾರತ ನಿರ್ವಿುಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net