

ಮಂಗಳೂರು : ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹರ್ಷ ವ್ಯಕ್ತ ಪಡಿಸಿದ್ದು, ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಕಿಶೋರ್ ಕುಮಾರ್ ಪುತ್ತೂರು ಈಗ ಎಂಎಲ್‌ಸಿಯಾಗಿ ಚುನಾಯಿತರಾಗಿರುವುದು ಬಿಜೆಪಿಗೆ ಹೆಮ್ಮೆಯ ಕ್ಷಣವಾಗಿದೆ. ಅವರ ಯಶೋಗಾಥೆ ತಳಮಟ್ಟದ ನಾಯಕರನ್ನು ಸಬಲೀಕರಣಗೊಳಿಸುವ ಮತ್ತು ವಿಶೇಷವಾಗಿ ಒಬಿಸಿ ಸಮುದಾಯಗಳಿಗೆ ಸಾಮಾಜಿಕ
ನ್ಯಾಯ ನೀಡುವ ಬಿಜೆಪಿಯ ಬದ್ಧತೆಗೆ ಸಾಕ್ಷಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಮತ್ತು ಅದರ ತಥಾಕಥಿತ ಅಹಿಂದ ನಾಯಕರು ಒಬಿಸಿ ಸಮುದಾಯಕ್ಕೆ ವಂಚನೆ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಕಾಂಗ್ರೆಸ್ ಅಲ್ಪಸಂಖ್ಯಾತ ಓಲೈಕೆ ರಾಜಕಾರಣದಿಂದಾಗಿ ಒಬಿಸಿ ಸಮುದಾಯಕ್ಕೆ ಬೆಲೆ ಇಲ್ಲದಂತಾಗಿದೆ. ಬಿಜೆಪಿ ಹಿಂದುಳಿದ ಸಮುದಾಯಗಳ ಉನ್ನತಿಗೆ ಮತ್ತು ಸಬಲೀಕರಣಕ್ಕೆ ಬದ್ಧವಾಗಿದೆ ಎನ್ನುವುದನ್ನು
ಮತ್ತೆ ಮತ್ತೆ ಸಾಬೀತುಪಡಿಸಿದೆ. ನಮ್ಮನ್ನು ನಂಬಿದ್ದಕ್ಕಾಗಿ ಧನ್ಯವಾದಗಳು. ನಾವು ಎಲ್ಲರ ಒಳಿತಿಗಾಗಿ ದಣಿವರಿಯಿಲ್ಲದೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
....................................