ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ರಥೋತ್ಸವ ಸಂಪನ್ನ

oplus_8388642
oplus_8388642
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.

ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ನೆರೆ ರಾಜ್ಯಗಳಿಂದಲೂ ಆಗಮಿಸಿದ್ದ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಹಣ್ಣು ದವನ ಸಮರ್ಪಿಸಿದರು. ವೆಂಕಟರಮಣಸ್ವಾಮಿ ಸ್ಮರಣೆ ಮಾಡುತ್ತಾ ಭಕ್ತರು ಜಯೋಷ ಕೂಗಿದರು. ಬ್ರಹ್ಮ ರಥೋತ್ಸವದ ಪ್ರಯುಕ್ತ ಗಣಪತಿ ಹೋಮ, ನವಗ್ರಹ ಹೋಮ, ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆ ನಡೆದವು. ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ವಾರದಿಂದಲೇ ಸಕಲ ಸಿದ್ದತೆ ನಡೆಸಿದ್ದು, ಉತ್ಸವದಂದು ರಥಬೀದಿಗಳಲ್ಲಿ ರಂಗೋಲಿ ಬಿಡಿಸಿ ಮನೆಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು..

ಮಧ್ಯಾಹ್ನ 12-12 ರಿಂದ 1 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವಕ್ಕೆ ಚಾಲನೆ ದೊರೆಯಿತು. ಸಾವಿರಾರು ಭಕ್ತರು ಜಮಾಯಿಸಿ ಸ್ವಾಮಿಯ ಜಯೋಷದೊಂದಿಗೆ ರಥವನ್ನು ಎಳೆದರು. ಈ ವೇಳೆ ನೂಕುನುಗ್ಗಲು ಏರ್ಪಟ್ಟರೂ ಅದೃಷ್ಟವಶಾತ್ ಯಾವುದೇ ತೊಂದರೆ ಎದುರಾಗಲಿಲ್ಲ. ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ಕಾರ್ಯಕ್ರಮಗಳು ನಡೆದವು. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net