ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ ವೃತ್ತ ಉದ್ಘಾಟನೆ

32
Published on

ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಶತೋತ್ತರ ದಶಮಾನೋತ್ಸವ(110ನೇ ಜಯಂತಿ), ಪ್ರತಿಭಾ ಪುರಸ್ಕಾರ ಮತ್ತು ಜೆಎಸ್‌ಎಸ್ ಬಡಾವಣೆಯ 2ನೇ ಹಂತದ ಜಗದ್ಗುರು ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ ವೃತ್ತ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.

ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾವಡಗೆಯ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಜೆಎಸ್‌ಎಸ್ ಎಂವಿಪಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಕೆ.ಗಂಗಾಧರಪ್ಪ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ನಿಶಾಂತ್, ಕಾರ್ಯಕ್ರಮದ ಸಂಚಾಲಕರೂ ಆದ ಸಂಘದ ನಿರ್ದೇಶಕ ಕಲ್ಮಳ್ಳಿ ನಟರಾಜು, ಅಖಿಲ ಭಾರತ ವೀರಶೈವ ಮಹಾಸಭೆಯ ನಿಕಟಪೂರ್ವ ಅಧ್ಯಕ್ಷ ಶಿವಮೂರ್ತಿ, ಸಂಘದ ನಿರ್ದೇಶಕರಾದ ನಾಗೇಂದ್ರಕುಮಾರ್, ಗವಿಯಪ್ಪ ದೇವರು, ವಿನುತಾ, ಗಾಯತ್ರಿ, ಪುಟ್ಟರಾಜಪ್ಪ ಮತ್ತು ಬಸವ ಬಳಗದ ಪೂರ್ವ ವಲಯದ ಅಧ್ಯಕ್ಷ ಶಿವಸ್ವಾಮಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಪುತ್ಥಳಿಯನ್ನು ತೆರೆದ ಅಲಂಕೃತ ವಾಹನದಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮದ ಮುಖ್ಯ ವೇದಿಕೆಗೆ ತರಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗಿಯಾಗಿದ್ದವು.

ಜತೆಗೆ ಜೆಎಸ್‌ಎಸ್ ಆಸ್ಪತ್ರೆಯ ಸಹಯೋಗದಲ್ಲಿ ಜೆಎಸ್‌ಎಸ್ ಬಡಾವಣೆಯ 2ನೇ ಹಂತದ ಶ್ರೀನಿಕ ಫಂಕ್ಷನ್ ಹಾಲ್‌ನಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವು ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net