ಜಗದೀಶ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲು

ADHIKARI
Published on

ಮೂಡುಬಿದಿರೆ: ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸೋಮವಾರ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.

ಕೋಟಿ ಚೆನ್ನಯ್ಯ, ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ, ಬಿಲ್ಲವ ಮುಖಂಡ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಜಗದೀಶ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ರಾಜು ಪಿ.ಕೆ ಸಹಿತ ಬಿಲ್ಲವ ಮುಖಂಡರು ಶುಕ್ರವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಜಗದೀಶ್ ಅಧಿಕಾರಿ ವಿರುದ್ಧ ದಂಡ ಸಂಹಿತೆ ಕಲಂ 295(ಎ), 505 ಅಡಿಯಲ್ಲಿ ಜಾಮೀನುರಹಿತ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net