ಎಸ್. ಜಗದೀಶ್ಚಂದ್ರ ಅಂಚನ್‌ಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

jjjjjjjjjjjj
Published on





ಮಂಗಳೂರು : ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಕ್ರೀಡಾ ಬರವಣಿಗಾಗಿ ನೀಡಲಾಗುವ ಕರ್ನಾಟಕ ಕಲಾಶ್ರೀ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ತುಮಕೂರಿನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.
ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಜಗದೀಶ್ಚಂದ್ರ ಅಂಚನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಸಿವಿಲ್ ಹಿರಿಯ ನ್ಯಾಯಾಧೀಶ ಎ. ಸೋಮಶೇಖರ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಎಸ್. ಸಿದ್ಧಲಿಂಗಪ್ಪ, ಚಿತ್ರನಟಿ ಕು. ಸಿಂಚನಾ ಪಿ. ರಾವ್, ತುಮಕೂರು ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಸಾಗರ್. ಟಿ. ಎಸ್ ., ಚಲನಚಿತ್ರ ನಿರ್ಮಾಪಕ ಎಸ್.ಶ್ರೀನಿವಾಸ್, ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಚ್. ಸೋಮಶೇಖರ್ ಉಪಸ್ಥಿತರಿದ್ದರು.
ಮೂರು ದಶಕದಿಂದ ಕ್ರೀಡಾ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಇದುವರೆಗೆ 5000ಕ್ಕೂ ಹೆಚ್ಚು ಕ್ರೀಡಾ ಲೇಖನ/ಅಂಕಣ ಬರಹಗಳನ್ನು ಬರೆದಿದ್ದು , ರಾಜ್ಯ , ಅಂತರ್ ರಾಜ್ಯ ಮಟ್ಟದ ವಿವಿಧ ದಿನ ಪತ್ರಿಕೆಗಳಲ್ಲಿ , ವಾರಪತ್ರಿಕೆಗಳಲ್ಲಿ ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಹಲವಾರು ರಾಜ್ಯ , ಅಂತರ್ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳಿಂದ ಅಂಚನ್
ಪುರಸ್ಕೃತರಾಗಿದ್ದಾರೆ.

ಫೋಟೋ : ಎಂಎನ್‌ಜಿ-8ಎಪ್ರಿ-ಜಗದೀಶ್ ಅಂಚನ್
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಜಗದೀಶ್ಚಂದ್ರ ಅಂಚನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net