ಜಗಳೂರಲ್ಲಿ ಮೊದಲ ಕರೊನಾ ಪ್ರಕರಣ

JLR CORONA 29
Published on

ಜಗಳೂರು: ಪಟ್ಟಣದ ಬೈಪಾಸ್ ರಸ್ತೆಯ (ಕೆರೆ ಅಂಗಳ) ವ್ಯಕ್ತಿಯೊಬ್ಬರಲ್ಲಿ ಕರೊನಾ ಇರುವುದು ಸೋಮವಾರ ದೃಢಪಟ್ಟಿದೆ. ತಾಲೂಕಿನ ಮೊದಲ ಪ್ರಕರಣ ಇದಾಗಿದೆ.

24ರಂದು ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ಬಂದ ವರದಿಯಲ್ಲಿ ಸೋಂಕು ದೃಢವಾಗಿದೆ.

ಸೋಂಕಿತನನ್ನು ಕೋವಿಡ್ 19 ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದು, ಈತನ ಪ್ರಥಮ ಸಂಪರ್ಕದಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ. ಉಳಿದ ಸಂಪರ್ಕಿತರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ್, ಪಪಂ ಮುಖ್ಯಾಧಿಕಾರಿ ರಾಜು ಡಿ.ಬಣಕಾರ್, ಸಿಪಿಐ ದುರುಗಪ್ಪ. ಪಿಎಸ್‌ಐ ಉಮೇಶ್‌ಬಾಬು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ವ್ಯಕ್ತಿಯ ಮನೆಯ ಸುತ್ತಮುತ್ತ ರಾಸಾಯನಿಕ ಸಿಂಪಡಿಸಲಾಯಿತು. ಬೀದಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net