ಬಿಳಿಚೋಡು ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

DVG Bilichodu MAY 10 (2)
ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಕೆರೆ ಹೂಳೆತ್ತುವ ಕಾರ್ಯ ನಡೆಯಿತು. 
Published on

ಜಗಳೂರು: ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಕೆಲಸವಿಲ್ಲದೆ ಕೃಷಿ ಕೂಲಿಕಾರರು ಮನೆಯಲ್ಲಿದ್ದರು. ಜನರಿಂದ ಕೂಲಿಗಾಗಿ ಬೇಡಿಕೆ ಹೆಚ್ಚಿದ್ದರಿಂದ ಉದ್ಯೋಗ ಖಾತ್ರಿ ಯೋಜನೆಯಡಿ 350ಕ್ಕೂ ಅಧಿಕ ಮಂದಿಗೆ ಕೆಲಸ ನೀಡಲಾಗಿದೆ.
ಕೂಲಿ ಅರಸಿ ಬಂದವರಿಗೆ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸರ್, ಕುಡಿವ ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. 5 ಜನರಿಗೆ ಒಂದರಂತೆ 73 ಗುಂಪುಗಳನ್ನು ವಿಂಗಡಿಸಿ, ಕೆಲಸ ಹಂಚಿಕೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net