ಗೌರಿಪುರ ಪ್ರೌಢಶಾಲೆಯ ಶಿಕ್ಷಕ ಎಚ್.ಎಂ. ಕರಿಬಸಪ್ಪಗೆ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ

Jagaluru, Gauripur, Teacher, Award,
Published on

ಜಗಳೂರು: ತಾಲೂಕಿನ ಗೌರಿಪುರ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಂ. ಕರಿಬಸಪ್ಪ ಜಿಲ್ಲಾ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾವಣಗೆರೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

2008ರಲ್ಲಿ ತಾಲೂಕಿನ ರಸ್ತೆಮಾಚಿಕೆರೆ ಶಾಲೆಯಲ್ಲಿ ವೃತ್ತಿ ಆರಂಭಿಸಿದ ಅವರು, ಖೋ-ಖೋ ಕ್ರೀಡೆಯಲ್ಲಿ ಅನುಭವ ಪಡೆದು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ, ತರಬೇತುದಾರರಾಗಿ ಹೆಸರು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ನೆಚ್ಚಿನ ಮೇಷ್ಟ್ರು: ಎಚ್.ಎಂ. ಕರಿಬಸಪ್ಪ ಅವರು ರಾಜ್ಯದ ಖೋ-ಖೋ ತಂಡ ಪ್ರತಿನಿಧಿಸಿದ್ದಲ್ಲದೆ, ದೆಹಲಿ, ಮಹರಾಷ್ಟ್ರ, ಕೇರಳ ರಾಜ್ಯಗಳಲ್ಲಿ ನಡೆದ ರಾಜ್ಯ, ರಾಷ್ಟ್ರ ಮಟ್ಟದ ಖೋ-ಖೋ ಕ್ರೀಡಾಕೂಟಗಳಲ್ಲಿ ಟೆಕ್ನಿಕಲ್ ತೀರ್ಪುಗಾರರಾಗಿ ಕೆಲಸ ಮಾಡಿದ ಕೀರ್ತಿ ಅವರದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net