ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವುದಿಲ್ಲ: ಸಿದ್ದರಾಮಯ್ಯ

Siddaramyya 2
Published on

ಮೈಸೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದರು.

ಅವರು ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net