ಯಾರನ್ನು ಕೊಲ್ಲುವ ಹಕ್ಕಿಲ್ಲ, ಪಾಪಕರ್ಮ ಅವನನ್ನು ಸುಡುತ್ತದೆ..ಮದಕ್ಕೆ ಕರುಣೆ ಇಲ್ಲಾ; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

Jaggesh
Published on

ಬೆಂಗಳೂರು: ಸ್ಯಾಂಎಡಲ್​ವುಡ್​ ನಟ ಜಗ್ಗೇಶ್​​ ಅವರು ಸೋಶಿಯಲ್​​ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಪ್ರಚಲಿತ ವಿಷಯಗಳ ಕುರಿತಾಗಿ  ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ.  ಇದೀಗ ಮಾರ್ಮಿಕವಾಗಿ ಟ್ವೀಟ್​​ ಮಾಡಿ ಸುದ್ದಿಯಾಗಿದ್ದಾರೆ.

ಜಗ್ಗೇಶ್ ಟ್ವೀಟ್​ನಲ್ಲಿ ಏನಿದೆ..? : ಸರ್ವಆತ್ಮಾನೇನಬ್ರಹ್ಮ..ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ, ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲಾ. ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ

ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ. ಮದಕ್ಕೆ ಕಾರುಣ್ಯದ ಅರಿವಿಲ್ಲಾ ಎಂದು ಟ್ವೀಟ್​​ ಮಾಡಿದ್ದಾರೆ.

ಜಗ್ಗೇಶ್ ಅವರು ತಮ್ಮ ಟ್ವೀಟ್​ನಲ್ಲಿ ಎಲ್ಲಿಯೂ ಕೂಡ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಜೊತೆಗೆ ದರ್ಶನ್ ಅವರ ಹೆಸರನ್ನೂ ಪ್ರಸ್ತಾಪಿಸಿಲ್ಲ. ನಿನ್ನೆಯ ಬೆಳವಣಿಗಳ ಬೆನ್ನಲ್ಲೇ ಜಗ್ಗೇಶ್ ಈ ರೀತಿ ಟ್ವೀಟ್ ಮಾಡಿರೋದು ಚರ್ಚೆ ಆಗ್ತಿದೆ. ದರ್ಶನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ದರ್ಶನ್​​ ಪ್ರಕರಣವೇನು?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು.  ಈ ವಿಚಾರ ದರ್ಶನ್​ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net