ಜಗಜೀವನ್ ರಾಮ್ ಜಯಂತಿ ನಾಡಿದ್ದು

02-DVD-3
ದೇವದುರ್ಗದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ಕುಲಕರ್ಣಿ, ಪರಿಶಿಷ್ಟ ಪಂಗಡಗಳ ಇಲಾಖೆ ಸಹಾಯಕ ಉಪನಿರ್ದೇಶಕಿ ಮಂಜುಳಾ ಅಸುಂಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪನಿರ್ದೇಶಕ ರಾಜ್‌ಕುಮಾರ ಇತರರಿದ್ದರು.
Published on

ದೇವದುರ್ಗ; ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಜಯಂತಿ ಏ.5ರಂದು ಪಟ್ಟಣದ ಮಿನಿವಿಧಾನಸೌಧದಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹೇಳಿದರು.

ಪಟ್ಟಣದ ಮಿನಿವಿಧಾನಸೌಧ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಲೋಕಸಭೆ ಚುನಾವಣೆ ನೀತಿ ಸಂಹಿತಿ ಹಿನ್ನೆಲೆಯಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು.

ಎಲ್ಲ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಜಗಜೀವನ್ ರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು. ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಭಾಗಹಿಸಬೇಕು. ನಿರ್ಲಕ್ಷೃ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ಕುಲಕರ್ಣಿ, ಪರಿಶಿಷ್ಟ ಪಂಗಡಗಳ ಇಲಾಖೆ ಸಹಾಯಕ ಉಪನಿರ್ದೇಶಕಿ ಮಂಜುಳಾ ಅಸುಂಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪನಿರ್ದೇಶಕ ರಾಜ್‌ಕುಮಾರ, ಮುಖಂಡರಾದ ಮಾನಪ್ಪ ಮೇಸ್ತ್ರಿ, ಬಸವರಾಜ ಅಕ್ಕರಕಿ, ಹನುಮಂತ ಮನ್ನಾಪುರ, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net