ದೇವಸ್ಥಾನದ ಆಭರಣ ಕಳವು ಮಾಡಿದವರಿಗೆ ಜೈಲು ಶಿಕ್ಷೆ

A gavel and a name plate with the engraving Judgment
A gavel and a name plate with the engraving Judgment
Published on

ಉಡುಪಿ: ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಅಪರಾಧಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ 2 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ ತಲಾ 5,500 ರೂ. ದಂಡ ವಿಧಿಸಿದೆ.

ನರಸಿಂಹರಾಜು ಅಲಿಯಾಸ್ ಬಸವರಾಜು ಮತ್ತು ಮೊಹಮ್ಮದ್ ಶಬ್ಬೀರ್ ಶಿಕ್ಷೆಗೆ ಒಳಗಾದವರು. 2015ರಲ್ಲಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ಸುಮಾರು 8,66,800 ರೂ. ಮೌಲ್ಯದ 339.940 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವು ಮಾಡಿದ್ದರು. ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net