

ಬೆಳಗಾವಿ: ಜೈನ ಸಮುದಾಯದ ವಿವಿಧ ಬೇಡಿಕೆ ಈಡೇರಿಸುವಂತೆ ಡಿ.9ರಂದು ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಸ್ತ ಜೈನ ಅಲ್ಪಸಂಖ್ಯಾತರ ಹೋರಾಟ ಸಮಿತಿ ಮುಖಂಡ ವಿನೋದ ದೊಡ್ಡಣ್ಣವರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜೈನ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಿ ಪ್ರತಿ ವರ್ಷ 200 ಕೋಟಿ ರೂ. ಅನುದಾನ ನೀಡಬೇಕು. ಕರ್ನಾಟಕ ಸರ್ಕಾರದ 414 ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಮತ್ತು ಜೈನ ಜನಸಂಖ್ಯೆ ಹೆಚ್ಚು ಇರುವ ಜಿಲ್ಲೆಗಳಲ್ಲಿ ಎರಡು ವಿದ್ಯಾರ್ಥಿನಿಲಯಗಳನ್ನು ಮೀಸಲಿಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಜೈನ ಸಮುದಾಯಕ್ಕೆ ಸಿಕ್ಕಿಲ್ಲ. ಹೀಗಾಗಿ ಅಧ್ಯಕ್ಷ ಸ್ಥಾನ ಸಮುದಾಯಕ್ಕೆ ಕೊಡಬೇಕು ಹಾಗೂ ಇನ್ನು ನಿಗಮದಲ್ಲಿ ಜೈನ ನಿರ್ದೇಶಕರ ಆಯ್ಕೆ ಆಗಿಲ್ಲ. ತಕ್ಷಣ ಇಬ್ಬರು ಜೈನ ನಿರ್ದೇಶಕರನ್ನು ಆಯ್ಕೆ ಮಾಡಬೇಕು. ಅಲ್ಪಸಂಖ್ಯಾತರ ವಿಭಾಗದಲ್ಲಿ ಶೇ.5ರಷ್ಟು ಇರುವ ಜೈನ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲಾಗಿದೆ.ಅದನ್ನು ಶೇ.20 ಹೆಚ್ಚಿಸಬೇಕು.
ಹಾಗೂ ಪ್ರಾಚೀನ ಜೈನ ಬಸದಿ ಮತ್ತು ಬಸದಿಗಳ ಆಸ್ತಿಯ ಸಂರಕ್ಷಣೆಗಾಗಿ ಕಠಿಣ ಕಾನೂನು ತರಬೇಕು ಮತ್ತು ಎಲ್ಲ ಪ್ರಾಚೀನ ಬಸದಿ ಮತ್ತು ಆಸ್ತಿಗಳ ಸರ್ವೇ ಮಾಡಿ ಅತಿಕ್ರಮಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದರು.ಅಭಯ ಅವಲಕ್ಕಿ, ವರ್ಧಮಾನ ಮಾರ್ಗನಕೊಪ್ಪ ಇತರರಿದ್ದರು.