ಜಗತ್ತಿಗೆ ಭಾರತ ನೀಡಿದ ಕೊಡುಗೆ ಜೈನ ಧರ್ಮ

10 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಭಗವಾನ್ ಮಹಾವೀರರು ಜಗತ್ತಿಗೆ ಅಹಿಂಸೆ, ಶಾಂತಿ, ನೀತಿ ತತ್ವ, ಸಿದ್ಧಾಂತಗಳನ್ನು ಬೋಽಸಿದರು. ಭಾರತವು ಜಗತ್ತಿಗೆ ನೀಡಿದ ಬಹು ದೊಡ್ಡ ಕೊಡುಗೆ ಜೈನ ಧರ್ಮವಾಗಿದೆ ಎಂದು ಜೈನ ವಿದ್ವಾಂಸ, ಮೈಸೂರಿನ ಡಾ. ಶುಭಚಂದ್ರ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕಾರ್ಯಕ್ರಮ ಉದ್ಘಾಟಿಸಿದರು. ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಅಧ್ಯಕ್ಷತೆ ವಹಿಸಿದ್ದರು.

ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿದ್ದು ಆಲಗೂರ, ಡಿಸಿಪಿಮಾನಿಂಗ ನಂದಗಾವಿ, ದಿಗಂಬರ ಜೈನ ಸಮಾಜ ಟ್ರಸ್ಟ್ ಅಧ್ಯಕ್ಷ ಡಾ. ಅಶೋಕ ರೋಖಡೆ, ಶ್ವೇತಾಂಬರ ಜೈನ ಸಮಾಜದ ಅಧ್ಯಕ್ಷ ಸೋಲಂಕಿ, ಸನ್ಮತಿ ಸೇವಾ ಸಮಿತಿ ಅಧ್ಯಕ್ಷ ಅಶೋಕ ಬಾಗಿ, ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಮುಖಂಡರಾದ ದತ್ತಾ ಡೋರ್ಲೆ, ಎಸಿಪಿ ಪ್ರಶಾಂತ ಸಿದ್ದನಗೌಡರ, ಇತರರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಜಿನದತ್ತ ಹಡಗಲಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net