

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಮರಶಿಲ್ಪಿ ಜಕಣಾಚಾರಿ ದಿನಾಚರಣೆಯನ್ನು ಜ. 8ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ವಿನಯ ಕುಲಕರ್ಣಿ , ಅಬ್ಬಯ್ಯ ಪ್ರಸಾದ, ಎನ್.ಎಚ್. ಕೋನರೆಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಮೇಯರ್, ಪಾಲಿಕೆ ಸದಸ್ಯರು, ಇತರರು ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಾಹಕ ವಿರೂಪಾಕ್ಷ ಬಡಿಗೇರ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.