

ಬಂಟ್ವಾಳ: ಬಂಟ್ವಾಳದ ಗಣೇಶೋತ್ಸವವೆಂದರೆ ಒಂದು ಜಾತಿ, ಮತ, ಧರ್ಮಕ್ಕೇ ಸೀಮಿತವಾಗಿರದೆ ಎಲ್ಲರೂ ಒಂದಾಗಿ ಬೆಸೆಯುವ,ಬೆರೆಯುವ ಸೌಹಾರ್ದತೆಯ ಸಮ್ಮೇಳನವಾಗಿ ರೂಪುಗೊಂಡ ಹಬ್ಬವಾಗಿ ಆಚರಿಸಲ್ಪಡುತ್ತಿದೆ ಎಂದು ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಜಕ್ರಿಬೆಟ್ಟುವಿನಲ್ಲಿ ಸೆ.11ರವರೆಗೆ ನಡೆಯಲಿರುವ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಳಗ್ಗೆ ಬಂಟ್ವಾಳ ಶ್ರೀ ಸೀತಾರಾಮ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಆಗಮಿಸಿದ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಬಳಿಕ ಕಾರ್ಯಕ್ರಮಗಳನ್ನು ಡಾ.ಶಿವಪ್ರಸಾದ್ ರೈ ಉದ್ಘಾಟಿಸಿದರು.
ಪ್ರಮುಖರಾದ ಮಾರಪ್ಪ ಶೆಟ್ಟಿ, ವಾಸು ಪೂಜಾರಿ ಲೊರೆಟ್ಟೊ, ಮಲ್ಲಿಕಾ ಪಕ್ಕಳ, ಜನಾರ್ದನ ಚಂಡ್ತಿಮಾರ್, ಅಬ್ಬಾಸ್ ಅಲಿ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಪಿಯೂಸ್ ಎಲ್.ರಾಡ್ರಿಗಸ್, ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಉಪಸ್ಥಿತರಿದ್ದರು.
ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಬೇಬಿ ಕುಂದರ್ ಪ್ರಸ್ತಾಪಿಸಿದರು. ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ರಾಜೀವ ಕಕ್ಯಪದವು ನಿರೂಪಿಸಿದರು.