ನಾಳೆ ಜಾಲಪ್ಪ ಶತಮಾನೋತ್ಸವ

Untitled-4
ಆರ್​ಎಲ್​ಜೆ ಐಟಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದೇವರಾಜ ಅರಸ್​ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿದರು. ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್​, ಲಯನ್ಸ್​ ಕ್ಲಬ್​ ಅಧ್ಯಕ್ಷ ಪ್ರೊ.ಕೆ.ಆರ್​.ರವಿಕಿರಣ್​, ಮಾನವ ಸಂಪನ್ಮೂಲ ನಿರ್ದೇಶಕ ಬಾಬು ರೆಡ್ಡಿ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್​, ಡೀನ್​ ಡಾ.ಶ್ರೀನಿವಾಸರೆಡ್ಡಿ ಇದ್ದರು.
Published on

ದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಕೇಂದ್ರ ಮಾಜಿ ಸಚಿವ ಆರ್​.ಎಲ್​.ಜಾಲಪ್ಪ ಶತಮಾನೋತ್ಸವ ಅ.19ರಂದು ಆರ್​ಎಲ್​ಜೆಐಟಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸ್​ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು. ನಗರದ ಆರ್​ಎಲ್​ಜೆಐಟಿ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ ಜಾಲಪ್ಪ ಅಕಾಡೆಮಿ ಕಟ್ಟಡ ಉದ್ಘಾಟಿಸಲಾಗುವುದು. ಪ್ರೊ.ಕೆ.ಆರ್​.ರವಿಕಿರಣ್​ ಬರೆದಿರುವ "ನೇರ ನಿಷ್ಠ್ಠುರ ನಡೆಯ ಹೃದಯವಂತ ಆರ್​.ಎಲ್​.ಜಾಲಪ್ಪ ಜೀವನ ಪಥ'ಪುಸ್ತಕವನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು. ಜಾಲಪ್ಪ ಶತಮಾನೋತ್ಸವ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್​.ಮುನಿಯಪ್ಪ ಶಿಲಾನ್ಯಾಸ ನೆರವೇರಿಸಲಿದ್ದು, ಶ್ರೀ ದೇವರಾಜ ಅರಸ್​ ಅಂತಾರಾಷ್ಟ್ರೀಯ ವಸತಿ ಶಾಲೆ ಕಟ್ಟಡ ನಿಮಾರ್ಣಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಜೆ.ರಾಜೇಂದ್ರ ತಿಳಿಸಿದರು.

ಕಾಲೇಜು ರಜತ ಮಹೋತ್ಸವ : 18ರಂದು ನಡೆಯುವ ಬೆಳ್ಳಿ ಹಬ್ಬದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್​.ವಿದ್ಯಾಶಂಕರ್​, ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಇತರರು ಭಾಗವಹಿಸಲಿದ್ದು, ಸಂಜೆ ಪ್ರಸಿದ್ಧ ಗಾಯಕಿ ಅನುರಾಧಾ ಭಟ್​ ಹಾಗೂ ಗಾಯಕ ಕಂಬದ ರಂಗಯ್ಯ ತಂಡದಿಂದ ಸಾಂಸತಿಕ ಕಾರ್ಯಕ್ರಮ ನಡೆಯಲಿದೆ ಎಂದು ಜೆ.ರಾಜೇಂದ್ರ ತಿಳಿಸಿದರು.

ಆರ್​.ಜಿ.ವೆಂಕಟಾಚಲಯ್ಯಗೆ ಪುರಸ್ಕಾರ : ಮಾಜಿ ಶಾಸಕ ಆರ್​.ಜಿ.ವೆಂಕಟಾಚಲಯ್ಯ ಅವರಿಗೆ ಜಾಲಪ್ಪ ಶತಮಾನೋತ್ಸವ ಪುರಸ್ಕಾರ ನೀಡಲಾಗುತ್ತಿದೆ. ಜತೆಗೆ 30ಕ್ಕೂ ಹೆಚ್ಚು ಹಿರಿಯ ಗಣ್ಯರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net