ಮಾಸಿಕ ಸಭೆಗಳಿಗೆ ತಪ್ಪದೆ ಹಾಜರಾಗಿ

jalige gp
Published on

ವಿಜಯವಾಣಿ ಸುದ್ದಿಜಾಲ ಕುಂದಾಣ
ಸರ್ವ ಸದಸ್ಯರ ಸಹಕಾರ ಪಡೆದು ಜಾಲಿಗೆ ಪಂಚಾಯಿತಿಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಗ್ರಾಪಂ ಅಧ್ಯಕ್ಷ ಸಿಂಗ್ರಹಳ್ಳಿ ಆನಂದ್ ಭರವಸೆ ನೀಡಿದರು.
ಹೋಬಳಿಯ ಜಾಲಿಗೆ ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
ಈ ಹಿಂದೆ ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆ ಕಾರ್ಯಕ್ರಮ, ಘನತ್ಯಾಜ್ಯ ವಿಲೇವಾರಿ ಘಟಕ, ಡಿಜಿಟಲ್ ಲೈಬ್ರರಿ ಉದ್ಘಾಟನೆ ಮುಂತಾದ ಜನಪರ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅಂತೆಯೇ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರತಿ ಮಾಸಿಕಸಭೆಯಲ್ಲಿ ಚುನಾಯಿತ ಸದಸ್ಯರು ತಪ್ಪದೆ ಹಾಜರಾಗಿ ಕುಂದು-ಕೊರತೆ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ದೇವನಹಳ್ಳಿ ತಾಲೂಕಿನಲ್ಲಿ ಆದಾಯ ಮೂಲಗಳಿರುವ ಪಂಚಾಯಿತಿಗಳಲ್ಲಿ ಜಾಲಿಗೆ ಕೂಡ ಒಂದಾಗಿದ್ದು, ಅಧಿಕಾರ ಯಾರಿಗೂ ಶಾಶ್ವತವಲ್ಲ. ಇರುವ ಅವಧಿಯಲ್ಲಿ ಜನರ ಸೇವೆ ಮಾಡಿ ಸಾರ್ಥಕತೆ ಮೆರೆಯಬೇಕು ಎಂದು ಮಾಜಿ ಅಧ್ಯಕ್ಷೆ ಸೌಮ್ಯಾಬಾಬು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net