ಮೂಲಸೌಕರ್ಯ ಒದಗಿಸಲು ಆಗ್ರಹ

JKD 10-1
Published on

ಜಮಖಂಡಿ: ಸಮೀಪದ ಕಡಪಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶ ನಗರಕ್ಕೆ ರಸ್ತೆ, ಕುಡಿಯುವ ನೀರು, ಬೀದಿದೀಪದ ವ್ಯವಸ್ಥೆ ಸೇರಿ ಇತರ ಮೂಲಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಅವರಿಗೆ ನಿವಾಸಿಗಳು ಶುಕ್ರವಾರ ಮನವಿ ಸಲ್ಲಿಸಿದರು.

ನಂತರ ಮಾತನಾಡಿ, ಗ್ರಾಮ ಪಂಚಾಯಿತಿಯಿಂದ ನಮ್ಮ ವಾರ್ಡ್‌ಗೆ ಯಾವುದೇ ಸೌಲಭ್ಯ ಕಲ್ಪಿಸುತ್ತಿಲ್ಲ. ಕಳೆದ ಐದಾರು ವರ್ಷದಿಂದ ಪಂಚಾಯಿತಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸ್ಪಂದಿಸುತಿಲ್ಲ. ಗ್ರಾಪಂ ಅಧಿಕಾರಿಗಳು ದಿವ್ಯ ನಿರ್ಲಕ್ಷೃ ವಹಿಸಿದ್ದಾರೆ. ಅದಕ್ಕಾಗಿ ನಮ್ಮ ಬಡಾವಣೆ ಅಭಿವೃದ್ಧಿ ಕೆಲಸವನ್ನು ತಾವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಆನಂದ ನ್ಯಾಮಗೌಡ ಅವರು, ಸದ್ಯ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ. ಅನುದಾನ ಬಂದ ಮೇಲೆ ಹಂತ ಹಂತವಾಗಿ ಬಡಾವಣೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅನಿಲ ಶುಕ್ಲೆ, ಎಸ್.ಎಸ್. ಬಾಲಗಾವಿ, ಜಿ.ಎನ್. ತೇಲಿ, ಸಂತೋಷ ಬಿರಾದಾರ, ಬಿ.ಎಂ. ಕುರುಹಿನಶೆಟ್ಟಿ, ಎಂ.ಎಸ್. ಬಾಲಗಾವಿ, ಎಸ್.ಎಸ್. ಮಧುರಖಂಡಿ, ಬಸವರಾಜ ಉಟಗಿ, ಎಸ್.ಎಸ್. ನವಣಿ ಇತರರು ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net