ಜಮೀರ್ ಅಹಮ್ಮದ್‌ಗೆ ಪ್ರಶಸ್ತಿ

Jameer
Published on

ಕುಶಾಲನಗರ:

ಬೆಂಗಳೂರಿನ ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಸೇವೆ ಗುರುತಿಸಿ ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ 'ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಡಾ. ಜಮೀರ್ ಅಹಮದ್ ಅವರು ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ನಿರ್ದೇಶಕ ಎಂ.ಡಿ. ಹಾಷಂ ತುಂಬಿದ ಮನೆ ಮತ್ತು ಮೊಖ್‌ಬುಲ್ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net