ಜನಸ್ಪಂದನ ಸಭೆಗೆ ನೀರಸ ಪ್ರತಿಕ್ರಿಯೆ

1001646828
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಹೊಳೆನರಸೀಪುರ: ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಗೆ ತಾಲೂಕಿನ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ತಹಸೀಲ್ದಾರ್ ರೇಣುಕುಮಾರ್ ನೇತೃತ್ವದಲ್ಲಿ ಜನಸ್ಪಂದನ ಸಭೆ ಏರ್ಪಡಿಸಲಾಗಿತ್ತು. ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳೊಟ್ಟಿಗೆ ಸಾರ್ವಜನಿಕರ ಸಮಸ್ಯೆಯನ್ನು ಪರಿಶೀಲಿಸಿ, ಅವುಗಳನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಸಭೆ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವು ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು ಎಂಬುದು ಜಿಲ್ಲಾಧಿಕಾರಿ ಸೂಚನೆ. ಆದರೆ ಸಮಯ ಮಧ್ಯಾಹ್ನ 12 ಆದರೂ ಕೆಲವು ಇಲಾಖೆಯ ಅಧಿಕಾರಿಗಳು ಆಗ ತಾನೇ ಆಗಮಿಸುತ್ತಿದ್ದರು. ಇನ್ನೂ ಕೆಲವು ಇಲಾಖೆಯ ಅಧಿಕಾರಿಗಳು ಹಾಜರಾಗದೆ ಜಿಲ್ಲಾಧಿಕಾರಿಗಳ ಆದೇಶಕ್ಕೂ ಮನ್ನಣೆ ನೀಡದಿರುವುದು ಕಂಡುಬಂತು. ಮಧ್ಯಾಹ್ನ 2 ಗಂಟೆಯವರೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಸಮಸ್ಯೆ ಬಗೆಹರಿಸುವಂತೆ ಕೋರಿ 21 ಅರ್ಜಿಗಳು ಸಲ್ಲಿಕೆಯಾದವು. ಬಹುಪಾಲು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದವು. ಕಂದಾಯ 12, ಲೋಕೋಪಯೋಗಿ 1, ಅಬಕಾರಿ 1 ತಾಲೂಕು ಪಂಚಾಯಿತಿ 2 ನೀರಾವರಿ 2, ಸರ್ಕಾರಿ ಆಸ್ಪತ್ರೆ 2, ಟ್ರಾಫಿಕ್ ಸಮಸ್ಯೆ ಬಗೆಹರಿಸುವಂತೆ ಪೊಲೀಸರಿಗೆ ಕೋರಿದ 1 ಅರ್ಜಿ ಸಲ್ಲಿಕೆ ಆದವು. ತಹಸೀಲ್ದಾರ್ ಅವರು ಆಯಾ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿ ತುರ್ತು ಕ್ರಮ ವಹಿಸುವಂತೆ ಸೂಚಿಸಿದರು.

ನಂತರ ಮಾತನಾಡಿದ ತಹಸೀಲ್ದಾರ್ ರೇಣು ಕುಮಾರ್, ಯಾವುದೇ ಇಲಾಖೆಯ ಅಧಿಕಾರಿಗಳು ಅಥವಾ ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಕ್ರಮವಾಗಿ ನಿರ್ವಹಿಸದಿದ್ದರೆ ನೇರವಾಗಿ ತಾಲೂಕು ಆಡಳಿತಕ್ಕೆ ದೂರು ನೀಡಬೇಕು. ಅದರ ಬಗ್ಗೆ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net