ರಾಯಚೂರಿಗೆ ನಾಳೆ ಜನಾಕ್ರೋಶ ಯಾತ್ರೆ

lng manappa vajjal
ಶಾಸಕ ಮಾನಪ್ಪ ವಜ್ಜಲ್
Published on

ಲಿಂಗಸುಗೂರು: ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕೈಗೊಂಡಿರುವ ಜನಾಕ್ರೋಶ ಯಾತ್ರೆಯು ಏ.23 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲೆಗೆ ಆಗಮಿಸಲಿದ್ದು, ಅಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲು, ಸಾರಿಗೆ, ಮದ್ಯ, ನೋಂದಣಿ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ.

ಪಂಚ ಗ್ಯಾರಂಟಿ ಯೋಜನೆ ನೆಪದಲ್ಲಿ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಯಚೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಾಲೂಕಿನಿಂದ ನಾಲ್ಕು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ವಕೀಲ, ಪ್ರಮುಖರಾದ ಗಿರಿಮಲ್ಲನಗೌಡ ಪಾಟೀಲ್, ಯಂಕನಗೌಡ ಗುಡದನಾಳ, ಮುದುಕಪ್ಪ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net