ಮೂಲ ಜನಪದ ಹಾಡುಗಾರಿಕೆ ತರಬೇತಿ

Published on

ಹುಬ್ಬಳ್ಳಿ: ಜನಪದರು ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಜಾನಪದ ಪರಿಷತ್, ಶ್ರೀ ಸಾಯಿ ಮಹಿಳಾ ಮಂಡಳ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಲ ಜನಪದ ಹಾಡುಗಾರಿಕೆ ತರಬೇತಿ ಶಿಬಿರದ ಸಮಾರೋಪವನ್ನು ಜುಲೈ 18ರಂದು ಬೆಳಗ್ಗೆ 10ಕ್ಕೆ ಉಣಕಲ್ಲ ಸಾಯಿನಗರದ ಶ್ರೀ ಮಾರುತಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.

ತರಬೇತಿ ಪಡೆದ ಮಹಿಳಾ ಮಂಡಳಗಳು ಹಾಡುಗಳನ್ನು ಪ್ರಸ್ತುತ ಪಡಿಸಲಿವೆ. ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಕವಿವಿ ಸಿಂಡಿಕೇಟ್ ಸದಸ್ಯ ಡಾ. ಲಿಂಗರಾಜ ಮುಳ್ಳಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾಯಿ ಮಹಿಳಾ ಮಂಡಳದ ಅಧ್ಯಕ್ಷೆ ಸುಮಿತ್ರಾ ಕುಂಬಾರ ಅಧ್ಯಕ್ಷತೆ ವಹಿಸುವರು ಎಂದು ಟ್ರಸ್ಟ್ ಅಧ್ಯಕ್ಷ ಡಾ. ರಾಮು ಮೂಲಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net