ಏ.15ರಂದು ನಗರದಲ್ಲಿ ಸನ್ಮಾನ ಸಮಾರಂಭ: ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಮಾಹಿತಿ

Janapada Parishad press conference Mandya
Published on

ಮಂಡ್ಯ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಗಾಯಕ ಹುರುಗಲವಾಡಿ ರಾಮಯ್ಯ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತೆ ಗಾಯಕಿ ಮಂಜುಳಾ ಅವರನ್ನು ಜಿಲ್ಲಾ ಕಲಾವಿದರ ಪತ್ತಿನ ಸಹಕಾರ ಸಂಘ, ಜಾನಪದ ಪರಿಷತ್, ಕರ್ನಾಟಕ ಸಂಘ, ಜಿಲ್ಲಾ ಯುವ ಪರಿಷತ್ ಸಹಯೋಗದೊಂದಿಗೆ ಏ.15ರಂದು ನಗರದಲ್ಲಿ ಅಭಿನಂದಿಸಲಾಗುವುದು ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ತಿಳಿಸಿದರು.

ಕಲಾವಿದರನ್ನು ಗೌರವಿಸಿ, ಅವರ ಮೂಲಕ ಇತರ ಕಲಾವಿದರಿಗೆ ಸ್ಪೂರ್ತಿ ತುಂಬುವ ನಿಟ್ಟಿನಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ರೂಪಿಸಲಾಗಿದೆ. ಸಂಜೆ 4 ಗಂಟೆಗೆ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಸಮಾರಂಭವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಅಭಿನಂದನಾ ನುಡಿಗಳನ್ನಾಡಲಿದ್ದು, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಮೀರಾಶಿವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಜಿಲ್ಲಾ ಯುವ ಪರಿಷತ್‌ನ ಅಧ್ಯಕ್ಷ ಕಾರಸವಾಡಿ ಮಹದೇವ, ಕಲಾವಿದರ ಪತ್ತಿನ ಸಹಕಾರ ಸಂಘದ ಪ್ರವರ್ಧಕರಾದ ಕೀಲಾರ ಸುರೇಶ್, ಗಾಮನಹಳ್ಳಿ ಸ್ವಾಮಿ, ಹನಿಯಂಬಾಡಿ ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net