

ಮಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ಯಾವುದೇ ಕೆಲಸದಲ್ಲಿ ಅವರ ಶ್ರದ್ಧೆ ಇತರರಿಗೆ ಮಾದರಿ . ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಸಲಹೆಗಾರರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ದೇಶಕ್ಕೆ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಸಂತಾಪ ಸೂಚಿಸಿದ್ದಾರೆ.
ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತಂದು ಕೊಟ್ಟ ಡಾ. ಸಿಂಗ್ ಅವರು ಆರ್ಥಿಕ ಸುಧಾರಣೆಗಳ ಮೂಲಕ
ಭಾರತಕ್ಕೆ ಜಾಗತಿಕ ಮನ್ನಣೆ ತಂದು ಕೊಟ್ಟಿದ್ದರು. ನಾನು ಅರ್ಥ ಖಾತೆಯ ಸಚಿವನಾಗಿದ್ದ ಸಂದರ್ಭ ಡಾ. ಸಿಂಗ್ ಅವರು ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದರು. ನಮ್ಮ ಮಧ್ಯೆ ಅತ್ಯುತ್ತಮ ಬಾಂಧವ್ಯವಿತ್ತು ಎಂದು ಪೂಜಾರಿ ಅವರು ಡಾ. ಸಿಂಗ್ ಅವರ ಒಡನಾಟದ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ.