ಅಧ್ಯಕ್ಷರಾಗಿ ಜನಾರ್ದನ್ ಆಯ್ಕೆ

27 HANUR 5
ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚಂದ್ರಶೇಖರ್, ಸರಸ್ವತಿ, ಗುರುಸ್ವಾಮಿ, ಜನಾರ್ದನ್, ಸ್ವಾಮಿ ಮತ್ತಿತರರಿದ್ದರು.
Published on

ಹನೂರು: ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘದ ಅಧ್ಯಕ್ಷರಾಗಿ ಜನಾರ್ದನ್ ಹಾಗೂ ಕಾರ್ಯದರ್ಶಿಯಾಗಿ ಸ್ವಾಮಿ ಅವರನ್ನು ಶನಿವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮ.ಬೆಟ್ಟದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಗೋಪಾಲ್ (ಗೌರವಾಧ್ಯಕ್ಷ), ಸರಗೂರು ಮಹದೇವಸ್ವಾಮಿ, ಸುಮಿತ್ರಾ ಬಾಯಿ (ಉಪಾಧ್ಯಕ್ಷೆ ), ರಾಜು (ಸಹ ಕಾರ್ಯದರ್ಶಿ), ಉಮೇಶ್, ಮಹೇಶ್ (ಸಂಘಟನಾ ಕಾರ್ಯದರ್ಶಿ), ರವಿ (ಖಜಾಂಚಿ), ಮಾದೇಶ್ (ಜಂಟಿ ಕಾರ್ಯದರ್ಶಿ) ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಸರ್ಕಾರದಿಂದ ಸವಲತ್ತುಗಳನ್ನು ಪಡೆದುಕೊಳ್ಳಲು ಹಾಗೂ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆ ಮುಖ್ಯ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮವಾಗಿ ಕಾರ್ಯನಿರ್ವಹಿಸುವುದರ ಜತೆಗೆ ಸಂಘದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾತನಾಡಿ, ನೂತನವಾಗಿ ರಚನೆಯಾಗಿರುವ ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸಿ ನೌಕರರ ಹಿತ ಕಾಪಾಡಲಿ. ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮವಹಿಸುವುದರ ಜತೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಕ್ರೀಡಾ ಕಾರ್ಯದರ್ಶಿ ರಕ್ಷಿತ್‌ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ, ಹನೂರು ತಾಲೂಕು ಅಧ್ಯಕ್ಷ ಗುರುಸ್ವಾಮಿ, ಪ್ರಭಾರ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಪದಾಧಿಕಾರಿಗಳಾದ ಶ್ರೀನಿವಾಸ ನಾಯ್ಡು, ಪ್ರೀತಮ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net