ನಾಗಮೋಹನ್‌ದಾಸ್‌ಗೆ ನಾಲ್ವಡಿ ಪ್ರಶಸ್ತಿ

Janashakthi - Nagamohan das
Published on

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ವತಿಯಿಂದ ನೀಡಲಾಗುವ 2024ನೇ ಸಾಲಿನ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 25 ಸಾವಿರ ರೂ. ನಗದು, ಕಂಚಿನ ಲಕ ಒಳಗೊಂಡಿರಲಿದೆ. ಜೂ.10ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಪ್ರದಾನ ಮಾಡಲಿದ್ದಾರೆ.

ನಿವೃತ್ತ ಪ್ರಾಧ್ಯಾಪಕ ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net