ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಅಹವಾಲು

17 smg 6
Published on

ಶಿವಮೊಗ್ಗ: ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಕೇಂದ್ರ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತಾ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮಂಗಳವಾರ ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ದೇವಸ್ಥಾನದಲ್ಲಿ ವಿಶೇಷ ಪೂಜೆ, ಕರೊನಾ ಸೇನಾನಿಗಳಿಗೆ ಸನ್ಮಾನ, ಮಠಾಧೀಶರು ಮತ್ತು ಸಮಾಜದ ವಿವಿಧ ಗಣ್ಯರೊಂದಿಗೆ ಪ್ರತ್ಯೇಕ ಸಂವಾದ ನಡೆಸಿದರು. ಬಳಿಕ ಜನಾಶೀರ್ವಾದ ಯಾತ್ರೆ ಅಂಗವಾಗಿ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಶಾಸಕರಾದ ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಕೆ.ಬಿ.ಅಶೋಕ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್ ಮುಂತಾದವರು ಕೇಂದ್ರ ಸಚಿವರಿಗೆ ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net