

ಮಡಿಕೇರಿ: ಜನಪ್ರತಿನಿಧಿಯಾಗಿ ಅಯ್ಕೆಯಾದವರು ತಮ್ಮ ಭೇಟಿಗೆ ಬರಲಿ ಎಂದು ಕಾಯುವುದರ ಬದಲು ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ ಬಗೆಹರಿಸಿದರೆ ಮಾತ್ರ ನೈಜ ಪ್ರಜಾಪ್ರಭುತ್ವ ಕಾಣಲು ಸಾಧ್ಯ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.
ಬೆಂಗಳೂರಿನ ವಿಧಾನಸೌಧದಲ್ಲಿರುವ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಪೊನ್ನಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನಾ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಸಲು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜೂ.೧೯ ರಂದು ವಿರಾಜಪೇಟೆ ಪಟ್ಟಣಕ್ಕೆ ಸಂಬಂಧಿಸಿದಂತೆ ಜನರ ಅಹವಾಲು ಆಲಿಸಲು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ನಂತರದಲ್ಲಿ ಪ್ರತಿ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಆಯಾಯ ಭಾಗಕ್ಕೆ ಸಂಬಂದಿಸಿದ ನಾಗರಿಕರು ಭಾಗವಹಿಸಬಹುದು ಎಂದು ಶಾಸಕರು ವಿನಂತಿ ಮಾಡಿದ್ದಾರೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಜನರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಆ ನಿಟ್ಟಿನಲ್ಲಿ ಸಾರ್ವಜನಿಕರು ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು ಎಂದು ಕೋರಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ನಿರ್ದೇಶನ ನೀಡಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಸ್ಪ?್ಟನೆ ನೀಡಿದರು.
-ಎ.ಎಸ್.ಪೊನ್ನಣ್ಣ