ಜನಸ್ಪಂದನಾ ಕಾರ್ಯಕ್ರಮ 10ರಂದು

web5
ಸವದತ್ತಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾತನಾಡಿದರು. ಎಂ.ಎನ್.ಮಠದ, ಮೋಹನ ದಂಡಿನ, ಆರ್.ಆರ್.ಕುಲಕರ್ಣಿ, ಸುನೀತಾ ಪಾಟೀಲ ಇತರರು ಇದ್ದರು.
Published on

ಸವದತ್ತಿ: ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೆ.10 ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾಹಿತಿ ನೀಡಿದರು.

ಇಲ್ಲಿನ ತಹಸೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿನ ಗುರುಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದು.

ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಬೀದರನಿಂದ ಚಾಮರಾಜ ನಗರದ ವರೆಗೆ ವಿಶ್ವದ ಅತಿ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸ ಸರ್ಕಾರ ಮಾಡಲಿದೆ. ತಾಲೂಕಿನ ಸುಮಾರು 40 ಕಿ.ಮೀ ಉದ್ದದ ಮಾನವ ಸರಪಳಿ ಜವಾಬ್ದಾರಿ ನಮ್ಮ ಮೇಲಿದ್ದು, ಸುಮಾರು 32,000 ಜನರು ಸೇರುವ ನಿರೀಕ್ಷೆ ಇದೆ. ಎಲ್ಲ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಹಾಜರಿರಬೇಕು ಎಂದರು.

ಯರಗಟ್ಟಿ ತಹಸೀಲ್ದಾರ್ ಎಂ.ಎನ್.ಮಠದ, ಬಿಇಒ ಮೋಹನ ದಂಡಿನ, ಸಮಾಜ ಕಲ್ಯಾಣಾಧಿಕಾರಿ ಆರ್.ಆರ್.ಕುಲಕರ್ಣಿ, ಸಿಡಿಪಿಒ ಸುನೀತಾ ಪಾಟೀಲ, ಪಿಐ ಧರ್ಮಾಕರ ಧರ್ಮಟ್ಟಿ, ಆರೋಗ್ಯಧಿಕಾರಿ ಶ್ರೀಪಾದ ಸಬನಿಸ್, ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net