ಜನರೊಂದಿಗೆ ಜನತಾದಳ ಕಾರ್ಯಕ್ರಮ ಮುಂದೂಡಿಕೆ

Published on

ಪಾಂಡವಪುರ: ಪಟ್ಟಣದ ಟಿಎಪಿಸಿಎಂಎಸ್ ರೈತಸಭಾಂಗಣದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಆ.30 ರಂದು ಆಯೋಜಿಸಿದ್ದ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್ ತಿಳಿಸಿದ್ದಾರೆ.

ಆ.31ರಂದು ನಿಖಿಲ್ ಕುಮಾರಸ್ವಾಮಿ ಸಾರಥ್ಯದಲ್ಲಿ ಜೆಡಿಎಸ್ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಾದ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net