

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ ಹಾಗೂ ಜಿಲ್ಲೆಯಲ್ಲಿನ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪ್ರತಿ ಸೋಮವಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹೇಳಿದರು.
ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿನ ಸಂಸದರ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿಗದಿತ ಕಾಲ ಮಿತಿಯಲ್ಲಿ ಬಗೆಹರಿಸಲು ಸೂಚಿಸಲಾಗುವುದು. ಸಾರ್ವಜನಿಕರು ಪ್ರತಿ ಸೋಮವಾರ ತಮ್ಮ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದರು. ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಅವುಗಳನ್ನು ಹಂತ ಹಂತವಾಗಿ ಪರಿಹರಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಜಿಲ್ಲೆಯ ಸಾರ್ವಜನಿಕರು ಅರ್ಜಿ ಮೂಲಕ ನೀಡಿದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಶೀಘ್ರ ಪರಿಹರಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.